Thursday, December 29, 2022

ವಿಶ್ವ ವಿದ್ಯಾಲಯ ಕರಾಟೆ ಸ್ಪರ್ಧೆಯಲ್ಲಿ ಭಟ್ಕಳದ ನಾಗಶ್ರೀ ನಾಯ್ಕ ಗೆ 3ನೇ ಸ್ಥಾನ.

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ. ನಾಗಶ್ರೀ ನಾಯ್ಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.

45 ಕೆ.ಜಿ ವಿಭಾಗಗಳ ಮಹಿಳಾ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಾಗಶ್ರೀ ನಾಯ್ಕ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರಾದ ವಿನಾಯಕ ನಾಯ್ಕ, ಉಪನ್ಯಾಸಕರು, ಸಿಬ್ಬಂದಿವರ್ಗ, ಶೋಟೋಕಾನ ಕರಾಟೆ ಸಂಸ್ಥೆಯ ಪದಾಧಿಕಾರಿಗಳು, ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿರುತ್ತಾರೆ.

No comments:

Post a Comment